ನ್ಯೂಸ್

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಹೋದರ ನಿಧನ..

ಮೈಸೂರು: ಮಾಜಿ ಮುಖ್ಯಮಂತ್ರಿ, ವಿಧಾನಪರಿಷತ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ (64) ಇಂದು ನಿಧನರಾದರು. ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಇವರು ಸಿದ್ದರಾಮಯ್ಯ ಅವರ ಕೊನೆಯ ತಮ್ಮ. ಸಿದ್ದರಾಮಯ್ಯ ಅವರ ತಂದೆ-ತಾಯಿಗೆ ಇವರು ಆರನೆಯ ಪುತ್ರ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅದಾಗ್ಯೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.