ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಕೆ.ಎಚ್. ಶ್ರೀನಿವಾಸ್ ನಿಧನರಾಗಿದ್ದಾರೆ. ಮೃತರಿಗೆ 86 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ಅವರ ಕುಟುಂಬದವರು ಮಾಹಿತಿ ನೀಡಿದ್ದಾರೆ.
ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ವಕೀಲರಾಗಿ. ಕೃಷಿಕರಾಗಿದ್ದರು. ಮೊದಲಿಗೆ ಜನತಾಪರಿವಾರದಲ್ಲಿ ಗುರುತಿಸಿಕೊಂಡ ಅವರು ನಂತರದ ದಿನಗಳಲ್ಲಿ ಕಾಂಗ್ರೆಸ್, ಜೆಡಿಎಸ್, ಕೆಜೆಪಿ ಮತ್ತು ಬಿಜೆಪಿಯಲ್ಲಿ ಇದ್ದರು. ಕಳೆದ ಕೆಲ ವರ್ಷಗಳಿಂದ ಸಕ್ರಿಯ ರಾಜಕಾರಾಣದಿಂದ ದೂರ ಉಳಿದಿದ್ದರು.
ದೇವರಾಜ ಅರಸು ಸರ್ಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇಂಧನ ಮತ್ತು ಮಾಹಿತಿ ಇಲಾಖೆಯ ಕ್ಯಾಬಿನೆಟ್ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 1987-88ರಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿದ್ದರು. ಆನಂತರ ವಿಧಾನಪರಿಷತ್‌ಗೂ ಆಯ್ಕೆಯಾಗಿ ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದರು. ಶ್ರೀನಿವಾಸ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
https://www.vijayavani.net/bellary-sp-clarifies-regarding-speculation-about-darshan-shifting-to-jail