ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಇನ್ನೂ ಪ್ರಕರಣದ ಕುರಿತು ರಾಜಕೀಯ ಪಕ್ಷಗಳ ನಾಯಕರು ಕಿಡಿಕಾರಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಿವರಾಮೇಗೌಡ, ಮಗ ಇಷ್ಟೆಲ್ಲಾ ಮಾಡಿದರು ಅವರ ಅಪ್ಪ-ಅಮ್ಮ ಏನ್ ಕತ್ತೆ ಕಾಯ್ತಿದ್ರಾ. ರೇವಣ್ಣ ಒಳ್ಳೆ ನಡವಳಿಕೆ ಇರುವ ವ್ಯಕ್ತಿಯಲ್ಲ. ಈ ಹಿಂದೆ ಇಂಗ್ಲೆಂಡ್ನಲ್ಲಿ ನನ್ನ ಜೊತೆ ಬಂದಾಗ ಅವರು ಸಿಕ್ಕಿಬಿದ್ದಿದ್ದರು. ಇಂದು ಹಾಸದನಲ್ಲಿ ನಡೆದಿರುವ ಘಟನೆಯೇ ಅಂದು ಇಂಗ್ಲೆಂಡ್ನಲ್ಲಿ ನಡೆದಿತ್ತು ಎಂದು ಆರೋಪಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಲೈಂಗಿಕ ಕಿರುಕುಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಶಾಸಕ ಎಚ್.ಡಿ. ರೇವಣ್ಣ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.