ನ್ಯೂಸ್

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕಾರಿಣಿ ಸಭೆ

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಪಕ್ಷದ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ನೇತೃತ್ವದಲ್ಲಿ ನಗರದಲ್ಲಿ ನಡೆಯಿತು.

ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಬಲಿಷ್ಠವಾಗಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವ ವಿಚಾರವಾಗಿ ಕಾರ್ಯಕಾರಿಣಿ ಸದಸ್ಯರು ಚರ್ಚೆ ನಡೆಸಿದರು.

ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜತೆಯಲ್ಲಿ ಹೊಂದಾಣಿಕೆಗೆ ಮುಂದಾದಲ್ಲಿ ಮುಕ್ತವಾಗಿ ಪಕ್ಷದ ಕಾರ್ಯಕರ್ತರೆಲ್ಲರೂ ಕೂಡ ಬದ್ಧವಾಗಿರಬೇಕು ಎಂಬ ವಿಚಾರಗಳನ್ನು ಚರ್ಚಿಸಿದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಾಲಿ ಜನಾದರ್ನ ರೆಡ್ಡಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಬದ್ಧರಾಗಿರಲು ಪಕ್ಷದ ಎಲ್ಲ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಒಕ್ಕೊರಲಿನಿಂದ ತೀರ್ಮಾನಿಸಿದರು.

ರಾಜ್ಯ ಉಪಾಧ್ಯಕ್ಷರಾದ ಮನೋಹರ ಗೌಡ ಹೇರೂರ್, ಮುನ್ನಾಭಾಯಿ, ದಿವಾಕರ್, ವೆಂಕಟರಮಣ, ಶ್ರೀಕಾಂತ ಬಂಡಿ, ರಾಜ್ಯ ಯುವ ಘಟಕದ ಅಧ್ಯಕ್ಷ ಭೀಮಾಶಂಕರ ಪಾಟೀಲ್, ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಹೇಮಲತಾ, ಬಳ್ಳಾರಿ ಜಿಲ್ಲಾಧ್ಯಕ್ಷ ಧಮ್ಮೂರ ಶೇಖರ, ಕೊಪ್ಪಳ ಜಿಲ್ಲಾಧ್ಯಕ್ಷ ಸಂಗಮೇಶ ಬಾದವಾಡಗಿ ಉಪಸ್ಥಿತರಿದ್ದರು.