ನ್ಯೂಸ್

Exit Poll 2024: ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ ಎಂದ ಡಿಕೆ ಶಿವಕುಮಾರ್

ಬೆಂಗಳೂರು: ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಹುತೇಕ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿಕೂಟ 20+ ಸ್ಥಾನ ಗೆಲ್ಲಬಹುದು ಹಾಗೂ ಕಾಂಗ್ರೆಸ್​ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಶಿವಕುಮಾರ್‌ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ ಎಂದು ನಾನು ಮೊದಲೇ ಹೇಳೀದ್ದೇನೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ದಾಟುತ್ತದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.