ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮೇ 20ರವರಗೆ ವಿಸ್ತರಿಸಿದೆ. ಈ ಮೊದಲು ಏ.22 ಕೊನೆಯ ದಿನವಾಗಿತ್ತು. ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುವ ಉದ್ದೇಶಕ್ಕಾಗಿ ಅರ್ಜಿ ವಿಸ್ತರಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಶಾಲಾ ಶಿಕ್ಷಣ ಇಲಾಖೆಯು ಲಭ್ಯವಿರುವ ನೆರೆಹೊರೆ ಶಾಲೆಗಳ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಅದನ್ನು ನೋಡಿಕೊಂಡು ಅಥವಾ ಸಂಬಂಧಪಟ್ಟ ಬಿಇಒ ಕಚೇರಿಯಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.