ಅರಕಲಗೂಡು ತಾಲೂಕು ಬೈಚನಹಳ್ಳಿ ಬಿಸಿಎಂ ವಿದ್ಯಾರ್ಥಿ ನಿಲಯ ಆಧುನೀಕರಣ ಕಾಮಗಾರಿಗೆ ಶಾಸಕ ಎ. ಮಂಜು ಭೂಮಿಪೂಜೆ ನೆರವೇರಿಸಿದರು. ಮಂಜಮ್ಮ, ಶೇಖರ್, ಮುರುಳಿ, ರಘು ಇತರರಿದ್ದರು. 
ನ್ಯೂಸ್

ಬಿಸಿಎಂ ವಿದ್ಯಾರ್ಥಿನಿಲಯಗಳ ದುರಸ್ತಿ, ಅಭಿವೃದ್ಧಿ ಕಾಮಗಾರಿ

ಎಂ.ರವಿ

ಅರಕಲಗೂಡು: ತಾಲೂಕಿನಲ್ಲಿ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳನ್ನು 1.30 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎ.ಮಂಜು ತಿಳಿಸಿದರು.

ತಾಲೂಕಿನ ಬೈಚನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಬಿಸಿಎಂ ವಿದ್ಯಾರ್ಥಿ ನಿಲಯದ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬಡ, ಹಿಂದುಳಿದ ವರ್ಗಗಳ ಮಕ್ಕಳು ವಿದ್ಯಾರ್ಥಿ ನಿಲಯಗಳಲ್ಲಿದ್ದು, ಹೆಚ್ಚುವರಿ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ.ಪಾಲಕರು ತಮ್ಮ ಮಕ್ಕಳನ್ನು ವಿದ್ಯಾರ್ಥಿ ನಿಲಯಗಳಿಗೆ ದಾಖಲಾತಿ ಮಾಡಿ ಉಚಿತವಾಗಿ ಸಿಗುವ ಸೌಕರ್ಯಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದರು.

ಬಡಮಕ್ಕಳೇ ಇರುವುದರಿಂದ ಅತ್ಯಂತ ಗುಣಮಟ್ಟದಿಂದ ಕೆಲಸಗಳು ನಡೆಯಬೇಕು. ಕೇವಲ ಇಲಾಖೆ ಅಧಿಕಾರಿಗಳು ಕಾಮಗಾರಿ ವೀಕ್ಷಣೆ ಮಾಡದೇ ಸ್ಥಳೀಯ ಗ್ರಾಪಂ ಆಡಳಿತ ಮತ್ತು ಸ್ಥಳೀಯರು ಕೂಡ ಕೆಲಸ ವೀಕ್ಷಣೆ ಮಾಡಿ ಗುಣಮಟ್ಟದಿಂದ ನಿರ್ವಹಣೆ ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ಬಗರ್ ಹುಕುಂ ಸಾಗುವಳಿ ಚೀಟಿಗೆ ಹಣ ಕೊಡಬೇಡಿ, ಸರ್ಕಾರ ಅರ್ಜಿ ಸಲ್ಲಿಸಿ, ಅನುಭವದಲ್ಲಿರುವ ಎಲ್ಲರಿಗೂ ಕೂಡ ನಿಯಮಾನುಸಾರ ಬಗರ್ ಹುಕುಂ ಸಮಿತಿ ವತಿಯಿಂದ ಫಲಾನುಭವಿಗಳಿಗೆ ಭೂಮಿ ಮಂಜೂರಾತಿ ಕಾರ್ಯ ಸದ್ಯದಲ್ಲೇ ನಡೆಯಲಿದೆ. ಈಗಾಗಲೇ ಭೂಮಿ ಕೊಡುವ ಭರವಸೆ ನೀಡಿ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಹಣ ಪಡೆಯುತ್ತಿರುವ ಬಗ್ಗೆ ದೂರು ಕೇಳಿಬಂದಿದೆ. ಯಾರೂ ಹಣ ಕೊಟ್ಟು ಕಳೆದುಕೊಳ್ಳಬೇಡಿ. ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ಎಲ್ಲ ವರ್ಗದವರಿಗೂ ಭೂಮಿ ಸಿಗಲಿದೆ. ಅರ್ಜಿ ಸಲ್ಲಿಸದೇ ಅನುಭವದಲ್ಲಿರುವವರನ್ನು ಕೂಡ ಒಕ್ಕಲೆಬ್ಬಿಸುವುದಿಲ್ಲ. ಅವರಿಗೂ ಸ್ಕೆಚ್ ಮಾಡಿಸಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷೆ ಮಂಜಮ್ಮ, ಮುಖಂಡರಾದ ಶ್ರೀನಿವಾಸ್, ಶೇಖರ್, ರಘು, ಕೃಷ್ಣೇಗೌಡ, ಮುರುಳಿ, ವಿಜಯಕುಮಾರ್, ಗ್ತಾಮಸ್ಥರು ಇದ್ದರು.