ನ್ಯೂಸ್

ಮೂವರು ಹೆಣ್ಣುಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ; ಘಟನೆಗೆ ಸಂಬಂಧಿಸಿದಂತೆ Police Officer ಹೇಳಿದ್ದಿಷ್ಟು

ಲಖನೌ: ಮೂವರು ಹೆಣ್ಣುಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐದು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಮೀರತ್​ನಲ್ಲಿ ನಡೆದಿದೆ. ಮೀರತ್​ನ ಲಿಸಾಡಿ ಗೇಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ಮೊಯಿನ್​, ಆಸ್ಮಾ, ಅಫ್ಸಾ (8), ಅಜೀಜಾ (4) ಮತ್ತು ಆದಿಬಾ (1) ಎಂದು ಗುರುತಿಸಲಾಗಿದೆ. ಮೃತ ಮೊಯಿನ್​ನ ಸಹೋದರ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು (Police Officers) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಘಟನೆ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಎಸ್​ಎಸ್​ಪಿ (Police Officer) ವಿಪಿನ್​ ತಾಡಾ, ಲಿಸಾಡಿ ಗೇಟ್​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮೊಯಿನ್​ನ ಸಹೋದರ ಎಷ್ಟು ಬಾರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಬಳಿ ಬಂದು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಮನೆಗೆ ಬೀಗ ಹಾಕಿರುವುದನ್ನು ನೋಡಿದರೆ ಕುಟುಂಬಕ್ಕೆ ಹತ್ತಿರವಿರುವವರು ಈ ಕೃತ್ಯ ಎಸಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಳೇ ದ್ವೇಷವೇ ಅಪರಾಧದ ಹಿಂದಿನ ಉದ್ದೇಶವಾಗಿರಬಹುದು ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ. ವಿಸ್ತೃತ ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಪರಿಶೀಲಿಸಿದಾಗ ಒಬ್ಬರ ಕಾಲನ್ನು ಬೆಡ್​ಶೀಟ್​ಗೆ ಕಟ್ಟಲಾಗಿದ್ದು, ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವೃತ್ತಿಯಲ್ಲಿ ಮೆಕ್ಯಾನಿಕ್​ ಆಗಿರುವ ಮೊಯಿನ್​ ಕೆಲ ದಿನಗಳ ಹಿಂದಷ್ಟೇ ಲಿಸಾಡಿ ಗೇಟ್​ ಪೊಲೀಸ್​ ಠಾಣಾ ವ್ಯಾಪ್ತಿಗೆ ಶಿಫ್ಟ್​​ ಆಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಎಸ್​ಎಸ್​ಪಿ (Police Officer) ವಿಪಿನ್​ ತಾಡಾ ತಿಳಿಸಿದ್ದಾರೆ.