ನ್ಯೂಸ್

ಕೌಟುಂಬಿಕ ಕಲಹಕ್ಕೆ ನಲುಗಿದ ತಾಯಿ ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ

ಚಿಕ್ಕೋಡಿ: ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದಲ್ಲಿ ನಡೆದಿದೆ.

ಮಲ್ಲವ್ವ ಬಸವರಾಜ (35) ಮಕ್ಕಳಾದ ಗುರುನಾಥ (10) ಹಾಗೂ ಸಿದ್ದಪ್ಪ (3) ಮೃತಪಟ್ಟವರು.

ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು. ಹೀಗಾಗಿ ಮಲ್ಲವ್ವ ತನ್ನ ಮಕ್ಕಳೊಂದಿಗೆ ಗ್ರಾಮದ ಹೊರ ವಲಯದಲ್ಲಿ ಹರಿಯತ್ತಿದ್ದ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಹುಕ್ಕೇರಿ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಶಿವಾನಂದ ಗುಡಗನಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ಕೇಸು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್​)