Maharashtra: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ (ಜು.17) ತಿಳಿಸಿದ್ದಾರೆ.
ವಾಣಿ-ದಿಂಡೋರಿ ರಸ್ತೆಯ ನರ್ಸರಿ ಬಳಿ ನಡೆದ ಈ ಘಟನೆಯ ಬಗ್ಗೆ ಬುಧವಾರ ರಾತ್ರಿ 11.57 ಕ್ಕೆ ಮಾಹಿತಿ ಸಿಕ್ಕಿತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ, ಎರಡೂ ವಾಹನಗಳು ರಸ್ತೆಯ ಪಕ್ಕದಲ್ಲಿರುವ ಸಣ್ಣ ಕಾಲುವೆಯಲ್ಲಿ ಉರುಳಿಬಿದ್ದಿರುವುದನ್ನು ಅವರು ಕಂಡುಕೊಂಡರು ಎಂದು ಅಧಿಕಾರಿ ತಿಳಿಸಿದ್ದಾರೆ.
ಮಾಹಿತಿ ತಿಳಿದ ನಂತರ ಪೊಲೀಸರು ಮತ್ತು ಇತರ ಏಜೆನ್ಸಿಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದವು. (ಏಜೆನ್ಸೀಸ್)