ತುಮಕೂರು: ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಇಬ್ಬರೂ ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಈ ಭಾರಿ ಅವಘಡ ಸಂಭವಿಸಿದೆ.
ಬೆಂಗಳೂರಿನ ಸುಂಕದಕಟ್ಟೆ ಬಳಿ ವಾಸವಾಗಿದ್ದ ತಿರುಮಲೇಗೌಡ (50), ಚಂದನ (20) ಮೃತ ದುರ್ದೈವಿಗಳು. ಇವರು ಇಂದು ತಮ್ಮ ಊರಾದ ಗುಬ್ಬಿ ತಾಲೂಕಿನ ಸಿಎಸ್ಪುರ ಬಳಿಯ ನೆಟ್ಟಿಗೆರೆ ಗ್ರಾಮದಲ್ಲಿ ಹಬ್ಬ ಮುಗಿಸಿಕೊಂಡು ಬೈಕ್ನಲ್ಲಿ ಬೆಂಗಳೂರಿಗೆ ಮರಳುವಾಗ ಈ ಅಪಘಾತ ಸಂಭವಿಸಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬನ್ನಿಮರದ ಕಟ್ಟೆ ಬಳಿ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ರಭಸಕ್ಕೆ ತಿರುಮಲೇಗೌಡ ಸ್ಥಳದಲ್ಲೇ ಸಾವಿಗೀಡಾದರೆ, ಪುತ್ರಿ ಚಂದನಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಳು. ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನಿಸಲಾಗಿದ್ದು, ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.