ನ್ಯೂಸ್

ಮಗಳನ್ನು ಗರ್ಭಿಣಿ ಮಾಡಿದ ತಂದೆಯ ಬಂಧನ

ಬೆಟ್ಟದಪುರ: ಬೆಟ್ಟದಪುರ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿಯೊಬ್ಬಳು ಎಂಟು ತಿಂಗಳ ಗರ್ಭಿಣಿಯಾಗಿದ್ದು, ಮಗಳನ್ನೇ ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇರೆಗೆ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ.

ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದರು. ವಿಚಾರಿಸಿದಾಗ ತಂದೆಯೇ ಒಂದು ವರ್ಷದಿಂದ ನಿರಂತರವಾಗಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಾಳೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬೆಟ್ಟದಪುರ ಪೊಲೀಸ್ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಬೆಟ್ಟದಪುರ ಪೊಲೀಸ್ ಠಾಣೆ ಅಜಯ್‌ಕುಮಾರ್ ಹಾಗೂ ಕ್ರೈಂ ವಿಭಾಗದ ಎಸ್‌ಐ ಸ್ವಾಮಿ ನಾಯಕ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.