ನ್ಯೂಸ್

ರಸಗೊಬ್ಬರ ಬೇಡಿಕೆಗೆ ತಕ್ಕಂತೆ ಪೂರೈಕೆ ಇಲ್ಲ

ಗೋವಿಂದರಾಜು ಚಿನ್ನಕುರ್ಚಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಯೂರಿಯಾ ಪೂರೈಕೆ ಆದರೇ ಮಾತ್ರ ಸಮಸ್ಯೆ ಬಗೆಹರಿಯಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಹಣಮಂತ ರುದ್ರಪ್ಪ ನಿರಾಣಿ ಪ್ರಶ್ಯೆಗೆ ಉತ್ತರಿಸಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಕೆ ಆಗಿಲ್ಲ. ಜತೆಗೆ ಕೇಂದ್ರ ಸರ್ಕಾರ ಕೂಡ ಯೂರಿಯಾ ಬಳಕೆ ಕಡಿಮೆ ಮಾಡಲು ನಿರ್ದೇಶನ ನೀಡಿತ್ತು. ಯೂರಿಯಾ ಬಗ್ಗೆ ಜಾಗೃತಿ ಮೂಡಿಸಿ ನ್ಯಾನೋ ಯೂರಿಯಾ ಬಳಕೆಗೆ ಸಲಹೆ ನೀಡಲಾಗಿದೆ. ಇದಲ್ಲದೆ, ಗೊಬ್ಬರ ಕೊರತೆ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಜತೆಗೆ ನಿರಂತರವಾಗಿ ಸಂಪರ್ಕದಲ್ಲಿ ಇದ್ದೇವೆ.

ಆದರೆ, ಕೇಂದ್ರ ರಸಗೊಬ್ಬರ ಮತ್ತು ರಾಸಾನಿಯಕ ಸಚಿವ ಜೆ.ಪಿ. ನಡ್ಡಾ ಮಾತ್ರ ಸಂಪರ್ಕಕ್ಕೆ ಸಿಗುತ್ತಿಲ್ಲ. ಬೇಡಿಕೆಗೆ ತಕ್ಕಂತೆ ಕೇಂದ್ರದಿಂದ ರಸಗೊಬ್ಬರ ಪೂರೈಕೆ ಆಗುತ್ತಿಲ್ಲ. ಕೇಂದ್ರದಿಂದ ರಸಗೊಬ್ಬರ ಬಾರದೆ ಇದ್ದರೇ ಸಮಸ್ಯೆ ಬಗೆಹರಿಸಲು ಸಾಧ್ಯವೇ ಇಲ್ಲ ಎಂದು ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.