ನ್ಯೂಸ್

ಕಂಪ್ಯೂಟರ್ ಆಪರೇಟರ್ ವಿರುದ್ಧ ವಂಚನೆ ಪ್ರಕರಣ ದಾಖಲು

ಅವಿನಾಶ್ ಜೈನಹಳ್ಳಿ

ಮೈಸೂರು: ಶ್ರೀರಾಂಪುರ ಪಟ್ಟಣ ಪಂಚಾಯಿತಿಯಲ್ಲಿ ಸರ್ಕಾರದ(ತೆರಿಗೆ) ಹಣವನ್ನು ತಮ್ಮ ಸ್ವಂತ ಖಾತೆಗೆ ವರ್ಗಾವಣೆ ಮಾಡಿಕೊಂಡು ಹಣ ದುರುಪಯೋಗ ಪಡಿಸಿಕೊಂಡಿರುವ ಪ್ರಕರಣ ಸಂಬಂಧ ಕಂಪ್ಯೂಟರ್ ಆಪರೇಟರ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಎಂ.ಕೆ.ಸುರೇಶ್ ನೀಡಿದ ದೂರಿನ ಮೇರೆಗೆ ದಿನಗೂಲಿ ನೌಕರರಾದ ಕಂಪ್ಯೂಟರ್ ಆಪರೇಟರ್ ನಮ್ರತಾ ವಿರುದ್ಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.