ನ್ಯೂಸ್

ಬೀದರ್ | ಪರೀಕ್ಷೆ ಭಯಕ್ಕೆ ಹಾಸ್ಟೆಲ್ ಮೇಲಿಂದ ಹಾರಿ ಪ್ರಾಣ ಬಿಟ್ಟ ಎಂಬಿಬಿಎಸ್ ವಿದ್ಯಾರ್ಥಿ!

Bengaluru - General - Rama Kishan K V

ಬೀದರ್: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ, ಜಿಲ್ಲೆಯ ಚಿಟ್ಟಗುಪ್ಪಾ ತಾಲ್ಲೂಕಿನ ಶ್ರೀರಾಮ್(22) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.

ಬೀದರ್ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಶ್ರೀರಾಮ್, ಕಲಿಕೆಯಲ್ಲಿ ಮುಂದಿದ್ದ. ಆದರೆ ತಂದೆಯ ಸಾವಿನಿಂದ ಕೆಲ ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಎನ್ನಲಾಗಿದೆ. ಇದೀಗ ಪ್ರಾಯೋಗಿಕ ಪರೀಕ್ಷೆ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳದಲ್ಲಿ ಸಹ ವಿದ್ಯಾರ್ಥಿಗಳು ಸ್ನೇಹಿತನನ್ನು ಕಳೆದುಕೊಂಡ ದುಃಖದಲ್ಲಿ ಕಣ್ಣೀರು ಹಾಕಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.