ನ್ಯೂಸ್

ಪೆಟ್ರೋಲ್ ದರ ಏರಿಕೆ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏನ್ ಹೇಳಿದ್ದಾರೆ ಗೊತ್ತಾ?

ನವದೆಹಲಿ: ಇಂಧನ ದರ ಏರಿಕೆ ಕುರಿತು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.

ಪೆಟ್ರೋಲ್, ಡಿಸೇಲ್ ದರ ಏರಿಕೆ ಬಗ್ಗೆ ಜನರಿಗೆ ಎಷ್ಟೇ ಸತ್ಯಾಂಶಗಳನ್ನು ಹೇಳಿದರೂ ಸದ್ಯ ಅದು ಯಾರಿಗೂ ಮನವರಿಕೆಯಾಗುವುದಿಲ್ಲ. ಆದರೆ, ಇಂಧನ ದರ ಇಷ್ಟು ಪ್ರಮಾಣದಲ್ಲಿ ಏರಿಕೆ ಕಂಡಿರುವುದು ಬೇಸರದ ಸಂಗತಿಯಾಗಿದೆ. ಮುಂದಿನದ ದಿನಗಳಲ್ಲಿ ಬೆಲೆ ಕುಸಿತವೇ ಇದಕ್ಕೆ ಉತ್ತರವಾಗಬೇಕಿದೆ ಎಂದು ಅವರು ಹೇಳಿದ್ದಾರೆ.

ಚಿಲ್ಲರೇ ಇಂದನವನ್ನು ಗ್ರಾಹಕರಿಗೆ ಯೋಗ್ಯ ದರದಲ್ಲಿ ನೀಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚರ್ಚೆ ನಡೆಸಬೇಕಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದ್ದು ರಾಜಸ್ತಾನ್ ಹಾಗೂ ಮುಂಬೈನಲ್ಲಿ ಈಗಾಗಲೇ ರೂಪಾಯಿ 100 ರ ಗಡಿಯನ್ನು ತಲುಪಿದೆ. ಶನಿವಾರದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಪೆಟ್ರೋಲ್ ದರ 93.21 ರೂ ಇದ್ದರೆ, ಡಿಸೇಲ್ ಬೆಲೆ 85.44 ರೂಪಾಯಿಗೆ ಮಾರಾಟವಾಗುತ್ತಿದೆ.