ನ್ಯೂಸ್

ಡಿ.ಕೆ.ಶಿವಕುಮಾರ್​ ವಿರುದ್ಧ ಎಫ್​ಐಆರ್; ಕೆಪಿಸಿಸಿಯ 30 ಮಂದಿ ಮೇಲೆ ಕೇಸು

ಬೆಂಗಳೂರು: ಸ್ಯಾಂಕಿ ಕೆರೆ ರಸ್ತೆ ಅಗಲೀಕರಣ ಮತ್ತು ಸೇತುವೆ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 30 ಮಂದಿಯ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಫೆ.20ರ ಬೆಳಗ್ಗೆ 8 ಗಂಟೆಯಲ್ಲಿ ಭಾಷ್ಯಂ ಸರ್ಕಲ್‌ನಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ರಮೇಶ್ ಬಾಬು, ಉಮಾ ಬಾಯಿ, ಅನೂಪ್ ಅಯ್ಯಂಗರ್, ರಶ್ಮಿ ಸೇರಿದಂತೆ 30 ಮಂದಿ ರಸ್ತೆ ಅಗಲೀಕರಣ ಮತ್ತು ಸೇತುವೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.

ಈ ಕುರಿತು ವೈಯಾಲಿಕಾವಲ್ ಠಾಣೆ ಪೊಲೀಸರು ಸ್ವಯಂದೂರು ದಾಖಲಿಸಿಕೊಂಡಿದ್ದಾರೆ. ಡಿಕೆಶಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ರಮೇಶ್ ಬಾಬು ಸೇರಿದಂತೆ 30 ಮಂದಿಯ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಅನುಮತಿ ಪಡೆಯದೆ ಅತಿಕ್ರಮವಾಗಿ ಗುಂಪು ಸೇರಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪರಿಣಾಮ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.