ನ್ಯೂಸ್

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪದಡಿ ಡಿಕೆಶಿ ವಿರುದ್ದ FIR ದಾಖಲು

ಬೆಂಗಳೂರು:  ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಕರ್ನಾಟಕ ಕಾಂಗ್ರೆಸ್​ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್, ಕಾಂಗ್ರೆಸ್ ಪಕ್ಷ ಹಂಚಿಕೊಂಡಿತ್ತು.

ಆದ್ದರಿಂದ ಫೋರ್ಜರಿ, ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಇದೀಗ ಡಿಕೆ ಶಿವಕುಮಾರ್​ ಮತ್ತು ಬಿ.ಆರ್.ನಾಯ್ಡು ವಿರುದ್ಧ 153(a), 504, 506,464 ಸೆಕ್ಷನ್​​ ಅಡಿ ಎಫ್​ಐಆರ್​ ದಾಖಲಿಸಲಾಗಿದೆ.