ನ್ಯೂಸ್

ವಿದ್ಯುತ್‌ ಶಾರ್ಟ್​ಸರ್ಕ್ಯೂಟ್‌: ಕಣ್ಣಿನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ವಿಜಯಪುರ: ನಗರದ ಕೇಂದ್ರ ಬಸ್‌ ನಿಲ್ದಾಣ ಬಳಿಯ ಅನುಗ್ರಹ ಕಣ್ಣಿನ ಆಸ್ಪತ್ರೆಯ ಕೊಠಡಿಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯ ಮೇಲಿನ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ. ಕೊಠಡಿಯಲ್ಲಿದ್ದ ಮಹತ್ವದ ದಾಖಲೆಗಳು ಬೆಂಕಿಗಾಹುತಿ ಆಗಿವೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.