ಜೈಪುರ: ರಾಜಸ್ತಾನದ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೋಗುತ್ತಿದ್ದ ಬಸ್‌ಗೆ ಬೆಂಕಿ (Fire) ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ 20 ಪ್ರಯಾಣಿಕರು ಮಂಗಳವಾರ ಮೃತಪಟ್ಟಿದ್ದಾರೆ.
57 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ಜೈಸಲ್ಮೇರ್-ಜೋಧ್‌ಪುರ ಹೆದ್ದಾರಿಯಲ್ಲಿ ಜೈಸಲ್ಮೇರ್‌ನಿಂದ ಹೊರಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಸಲ್ಮೇರ್‌ನಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಜನನಿಬಿಡ ಮಾರ್ಗದಲ್ಲಿ ಅವ್ಯವಸ್ಥೆ ಮತ್ತು ಭೀತಿ ಉಂಟಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಸ್ಸು ಜೈಸಲ್ಮೇರ್ ನಿಂದ ಮಧ್ಯಾಹ್ನ 3 ಗಂಟೆ ಸುಮಾರಿಗೆ 57 ಪ್ರಯಾಣಿಕರೊಂದಿಗೆ ಹೊರಟಿತ್ತು. ಥೈಯಾತ್ ಗ್ರಾಮವನ್ನು ದಾಟಿದ ಕೂಡಲೇ ಪ್ರಯಾಣಿಕರು ವಾಹನದ ಹಿಂಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ್ದು. ಕೆಲವೇ ಕ್ಷಣಗಳಲ್ಲಿ, ಜ್ವಾಲೆಗಳು ವೇಗವಾಗಿ ಹರಡಿ, ಇಡೀ ಬಸ್ಸನ್ನು ಆವರಿಸಿಕೊಂಡಿದೆ. ಅಲ್ಲದೆ, ಅನೇಕ ಪ್ರಯಾಣಿಕರು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಕಿಟಕಿಗಳು ಮತ್ತು ಬಾಗಿಲುಗಳ ಬಳಿಗೆ ಧಾವಿಸಿದ್ದಾರೆ. ಅಷ್ಟರಲ್ಲೇ ಬೆಂಕಿ ಕೆನ್ನಾಲಿಗೆಗೆ 20 ಪ್ರಯಾಣಿಕರು ಬಲಿಯಾಗಿದ್ದಾರೆ.(ಏಜೆನ್ಸೀಸ್)