ನ್ಯೂಸ್

ಮೈಸೂರು-ಉದಯಪುರ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ; ಕೆಲವು ರೈಲುಗಳ ಸಂಚಾರ ವ್ಯತ್ಯಯ| train

ರಾಮನಗರ : ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ: 19668) ರೈಲಿನ ಎಂಜಿನ್‌ನಲ್ಲಿ ಇಂದು (03) ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ಬೆಂಕಿ‌ ಕಾಣಿಸಿಕೊಂಡಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮೈಸೂರಿನಿಂದ‌ ಹೊರಟಿದ್ದ ರೈಲು ಬೆಳಿಗ್ಗೆ 11.45ರ ಸುಮಾರಿಗೆ ಚನ್ನಪಟ್ಟಣ ನಿಲ್ದಾಣ ದಾಟಿ ವಂದಾರಗುಪ್ಪೆ ಬಳಿ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಎಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಗಮನಿಸಿದ ಲೋಕೊಪೈಲಟ್ ಕೂಡಲೇ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ ರೈಲು ನಿಲ್ಲಿಸಿದ್ದಾರೆ.

(ಏಜೆನ್ಸೀಸ್)

ಸ್ಥಳಕ್ಕೆ ಬಂದ ಚನ್ನಪಟ್ಟಣದ ಅಗ್ನಿಶಾಮಕ ದಳದ ಸಿಬ್ಬಂದಿ ರೈಲ್ವೆ ನೌಕರರ ಸಹಕಾರದೊಂದಿಗೆ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ. ಬಳಿಕ ಬೇರೆ ಎಂಜಿನ್ ತಂದು ಅಳವಡಿಸಿದಾಗ ರೈಲು ಮುಂದೆ ಸಾಗಿದೆ. ಘಟನೆಯಿಂದಾಗಿ‌ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ರೈಲ್ವೆ ಇಲಾಖೆ ಮೂಲಗಳು ಮಾಹಿತಿ ನೀಡಿವೆ.