ನ್ಯೂಸ್

ಪಟಾಕಿ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ; ಇಬ್ಬರು ಸಾವು, ನಾಲ್ವರು ಗಂಭೀರ

ಚೆನ್ನೈ: ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ.

ಮೃತರನ್ನು ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂದು ಗುರುತಿಸಲಾಗಿದ್ದು, ಸೆಲ್ವಂ (21), ಪ್ರಶಾಂತ್ (20), ಸೆಂಧುರ್ಕನಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾತಾಂಕುಳಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಟ್ವೀಟ್​ ಮಾಡಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಮೃತರಿಗೆ ತಲಾ 3 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿರುವ ಸಿಎಂ ಸ್ಟಾಲಿನ್​ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.