ಶ್ರೀನಗರ: ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು ಆ್ಯಂಡ್ ಕಾಶ್ಮೀರ ಸಂಘಟನೆಗೆ ಸೇರಿದ ಐವರು ಉಗ್ರರನ್ನು ಇಂದು ಬಂಡಿಪೋರಾ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
ಕಾಶ್ಮೀರದಲ್ಲಿರುವ ಸೇನಾ ಶಿಬಿರವೊಂದರ ಮೇಲೆ ದಾಳಿ ನಡೆಸುವ ದೊಡ್ಡ ಯೋಜನೆಯನ್ನೇ ಹಾಕಿಕೊಂಡಿದ್ದ ಇವರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದನ್ನೂ ಓದಿ: ರಫೇಲ್ ಯುದ್ಧವಿಮಾನಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ; ಅಂಬಾಲದಲ್ಲಿ ಹೈಅಲರ್ಟ್
ಐಸಿಸ್ನ ಪ್ರದೇಶಿಕ ಸಂಘಟನೆಗಳಾದ ಐಎಸ್ಜೆಕೆ ಅಥವಾ ವಿಲಾಯಾಹ್-ಅಲ್-ಹಿಂದ್ ಉಗ್ರ ಸಂಘಟನೆಗಳು ಆರ್ಮಿ ಕ್ಯಾಂಪ್ ಮೇಲೆ ದಾಳಿ ನಡೆಸುವ ಸಂಚು ರೂಪಿಸಿವೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಡಿಪೋರಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಬಂಧಿತರಿಂದ ಮಾರಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಐಎಸ್ಜೆಕೆ ಉಗ್ರಸಂಘಟನೆ ಯುವಜನರನ್ನು ಭಯೋತ್ಪಾದನೆಗೆ ಸೆಳೆಯುವ ಜತೆ ಉಳಿದ ಕೆಲವು ಉಗ್ರಸಂಘಟನೆಗಳಿಗೂ ಸಹಕಾರ ನೀಡುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)