ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.
ಜಾರ್ಖಂಡ್ನ ಧಾನ್ಬಾದ್ನಲ್ಲಿ ದುರ್ಘಟನೆ ನಡೆದಿದೆ. ಈ ಐವರು ಪ್ರಯಾಣಿಸುತ್ತಿದ್ದ ಕಾರು, ನಿಂತಿದ್ದ ಸ್ಟೇಶನರಿ ಟ್ರಕ್ಗೆ ಡಿಕ್ಕಿಯಾಗಿದ್ದೇ ಅವಘಡಕ್ಕೆ ಕಾರಣ.
ಗೋವಿಂದ್ಪುರ-ಸಾಹಿಬ್‌ಗಂಜ್ ಹೆದ್ದಾರಿ ಬದಿಯಲ್ಲಿ ಟ್ರಕ್ ನಿಲ್ಲಿಸಲಾಗಿತ್ತು. ಕಾರು ಹಿಂದಿನಿಂದ ಟ್ರಕ್ಗೆ ಡಿಕ್ಕಿಯಾದ ಪರಿಣಾಮ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಕಾರು ಚಾಲಕ ಆಸ್ಪತ್ರೆಗೆ ದಾಖಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.