ನ್ಯೂಸ್

ಭೀಕರ ರಸ್ತೆ ಅಪಘಾತ: ಐವರು ವ್ಯಕ್ತಿಗಳು, 12 ಜಾನುವಾರುಗಳ ಸಜೀವ ದಹನ

ಜೈಪುರ: ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್​ಗಳಿಗೆ ಇನ್ನೊಂದು ಟ್ರಕ್​ ಟ್ರಕ್ ಗುದ್ದಿದ ಐವರು ಸಜೀವ ದಹನಗೊಂಡು, 12 ಪ್ರಾಣಿಗಳು ಸುಟ್ಟುಕರಕಲಾಗಿರುವ ದಾರುಣ ಘಟನೆ ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ನಡೆದಿದೆ.

ಹರ್ಯಾಣದ ನಿವಾಸಿಗಳಾದ ಪವನ್ (28), ಸಂಜು (18), ಧರಮ್‌ವೀರ್ (34) ಮತ್ತು ಬಿಹಾರದ ಛಾಪ್ರಾ ಮೂಲದ ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಮೃತ ದುರ್ದೈವಿಗಳಾಗಿದ್ದಾರೆ.

ಇದನ್ನೂ ಓದಿ: ಟ್ರಿಪ್​​​​​​ಗೆ ಹೋದ ಹೆಂಡತಿ ಮನೆಗೆ ಬಂದಿಲ್ಲ, ಫ್ರೀ ಬಸ್ ಪ್ರಯಾಣ ರದ್ದುಗೊಳಿಸಿ ಎಂದ ಕುಡುಕ ಪತಿರಾಯ

ಜೈಪುರ ಗ್ರಾಮಾಂತರದ ದುಡು ಪ್ರದೇಶದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಎರಡು ಟ್ರಕ್‌ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಲಾರಿಗಳ ಡೀಸೆಲ್ ಟ್ಯಾಂಕ್‌ಗಳು ಜಖಂಗೊಂಡು ಬೆಂಕಿ ಹೊತ್ತಿಕೊಂಡಿದ್ದು, ನೂಲು, ಪ್ಲಾಸ್ಟಿಕ್ ಬ್ಯಾಗ್‌ಗಳಂತಹ ವಸ್ತುಗಳು ಇದ್ದುದರಿಂದ ಬೆಂಕಿ ಹೊತ್ತಿಕೊಂಡಿದೆ. ಬಹುಶಃ ನಿದ್ರೆಯ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಹೆದ್ದಾರಿ ಬದಿಯಲ್ಲಿ ಅಪಘಾತ ಸಂಭವಿಸಿದ್ದರಿಂದ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಟೈಟಾನ್​ ನೌಕೆಯ ಅವಶೇಷಗಳು ವಶಕ್ಕೆ: ಮಾನವನ ದೇಹದ ಭಾಗಗಳೂ ಪತ್ತೆ, ಹೆಚ್ಚಿನ ವಿಶ್ಲೇಷಣೆಗಾಗಿ ರವಾನೆ

ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದ್ದು, ಜೈಪುರ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.(ಏಜೆನ್ಸೀಸ್​)