ಶಿವಮೊಗ್ಗ: ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನಯಾನ ಸಂಸ್ಥೆ ಸೇವೆ ಆರಂಭಿಸಲು ನಿರ್ಧರಿಸಿದ್ದು ಶಿವಮೊಗ್ಗ-ಚೆನ್ನೈ, ಶಿವಮೊಗ್ಗ-ಹೈದರಾಬಾದ್ ನಡುವೆ ಸ್ಪೈಸ್ ಜೆಟ್ ವಿಮಾನ ಹಾರಾಟ ಶೀಘ್ರವೇ ಶುರುವಾಗಲಿದೆ. ಈ ಸಂಬಂಧ ಸ್ಪೈಸ್‌ಜೆಟ್ ಈಗಾಗಲೇ ತನ್ನ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದಿಂದ ಎರಡು ಮಾರ್ಗಕ್ಕೆ ಟಿಕೆಟ್ ಬುಕಿಂಗ್ ಆರಂಭಿಸಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಕ್ಟೋಬರ್ 10ರಿಂದ ಎರಡು ಮಾರ್ಗದಲ್ಲಿ ವಿಮಾನ ಹಾರಾಟ ನಡೆಸಲಿದೆ. ಶಿವಮೊಗ್ಗ-ಹೈದರಾಬಾದ್ ಮತ್ತು ಶಿವಮೊಗ್ಗ-ಚೆನ್ನೈ ಮಾರ್ಗದಲ್ಲಿ ವಿಮಾನಗಳು ಹಾರಾಟ ನಡೆಸಲಿವೆ. ಇದಕ್ಕೆ ಈಗಾಗಲೇ ಸಿದ್ಧತೆಗಳು ಅರಂಭವಾಗಿದ್ದು, ಟಿಕೆಟ್ ಬುಕ್ಕಿಂಗ್ ಸರ್ವಿಸ್ ಶುರುವಾಗಿದೆ.
ಶಿವಮೊಗ್ಗದಿಂದ ಈವರೆಗೂ ಬೆಂಗಳೂರು, ಹೈದರಾಬಾದ್, ತಿರುಪತಿ, ಗೋವಾಗೆ ವಿಮಾನ ಹಾರಾಟ ನಡೆಸುತ್ತಿವೆ. ಇಂಡಿಗೋ ಮತ್ತು ಸ್ಟಾರ್ ಏರ್ ಲೈನ್ ವಿಮಾನಗಳು ಮಾತ್ರ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಕಾರ್ಯಾಚರಿಸುತ್ತಿವೆ. ಈಗ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಸೇವೆ ಒದಗಿಸಲು ಸಿದ್ಧತೆ ನಡೆಸಿದೆ.