ನ್ಯೂಸ್

ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಲು ಒತ್ತಾಯ. ಕೇಂದ್ರ ಸಚಿವ ವಿ.ಸೋಮಣ್ಣಗೆ ಮನವಿ:ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು.

ಬೆಂಗಳೂರು:ನೈರುತ್ಯ ರೈಲ್ವೆಯ ಸಹಾಯಕ ಲೋಕೋ ಪೈಲೆಟ್ ಹುದ್ದೆಗಳಿಗೆ ನಾಳೆ ನಡೆಯಲಿರುವ ಪರೀಕ್ಷೆಯಲ್ಲಿ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಬರೆಯಲು ಅವಕಾಶ ನೀಡಿದೆ. ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡದೇ ಆರೂವರೆ ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಈ ಕೂಡಲೇ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣರವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಈ ಹುದ್ದೆಗಳಿಗೆ ಮೇ ತಿಂಗಳಲ್ಲಿ ಹೊರಡಿಸಿದ್ದ ಸುತ್ತೋಲೆಯಲ್ಲಿ ಕನ್ನಡ ಭಾಷೆಗೂ ಸಹ ಅವಕಾಶವಿತ್ತು. ಈಗ ಹಿಂದಿ ಇಂಗ್ಲಿಷ್ ಜೊತೆಗೆ ತಮಿಳು ಭಾಷೆಗೆ ಮಾತ್ರ ಅವಕಾಶ ನೀಡಿ ಕನ್ನಡ ಭಾಷೆಯನ್ನು ಕೈ ಬಿಟ್ಟಿರುವುದು ನಿಜಕ್ಕೂ ದುರಂತ. 2 ತಿಂಗಳಿಂದ ಕನ್ನಡ ಭಾಷೆಯಲ್ಲಿ ಅಭ್ಯಸಿಸಿ ಸಿದ್ಧತೆ ಮಾಡಿಕೊಂಡಿರುವ ಲಕ್ಷಾಂತರ ಅಭ್ಯರ್ಥಿಗಳು ಹತಾಶೆಯ ಸ್ಥಿತಿಯಲ್ಲಿದ್ದಾರೆ. ಈ ಕೂಡಲೇ ರೈಲ್ವೆ ಖಾತೆ ಸಚಿವರು ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ಕೆ ಎ ಎಸ್ ಪರೀಕ್ಷೆ ದಿನಾಂಕ ಬದಲಿಸಲು ಸಿಎಂ. ಸಿದ್ದರಾಮಯ್ಯನವರಿಗೆ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರವನ್ನು ಬರೆದು , ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಇದೇ ತಿಂಗಳ ಆಗಸ್ಟ್ 25ರಂದು ದಿನಾಂಕವನ್ನು ನಿಗದಿಪಡಿಸಿದ್ದಾರೆ. ಆದರೆ ಕೇಂದ್ರ ಸರ್ಕಾರದ ಐಬಿಪಿಎಸ್ ಬ್ಯಾಂಕ್ ಕ್ಲರ್ಕ್ ಗಳ ಹುದ್ದೆಗಳಿಗಾಗಿ ನಿಗದಿಪಡಿಸಿದ್ದಾರೆ ಇದೆ ಆಗಸ್ಟ್ ತಿಂಗಳ 24ರಂದು ನಿಗದಿಪಡಿಸಿದ್ದಾರೆ. ಎರಡು ಹುದ್ದೆಗಳಿಗೆ ಅಭ್ಯಾಸ ಮಾಡುತ್ತಿರುವ ಲಕ್ಷಾಂತರ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶಿಸಿ ಕೆಎಎಸ್ ಪರೀಕ್ಷಾ ದಿನಾಂಕವನ್ನು ಮುಂದೂಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ ಪರೀಕ್ಷಾ ದಿನಾಂಕದಂದು ರಾಜ್ಯದ ಅನೇಕ ಜಿಲ್ಲೆಗಳಿಂದ ಆಗಮಿಸುವ ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಹಾಗೂ ರೈಲ್ವೆ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಸಹ ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.