ನ್ಯೂಸ್

ಎಫ್​ಎಸ್​​ಎಲ್​ ಅಧಿಕಾರಿ ಆತ್ಮಹತ್ಯೆ; ಕ್ಷಮಿಸಿ ಎಂದು ವಿಚ್ಛೇದಿತ ಪತಿಗೆ ಡೆತ್​ನೋಟ್ ಮೂಲಕ ವಿನಂತಿ

Webdesk - Ravikanth

ಬೆಂಗಳೂರು: ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪಾರ್ಟ್​ಮೆಂಟ್​ವೊಂದರಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳದಲ್ಲಿ ಡೆತ್​ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ.

ಎಫ್ಎಸ್​ಎಲ್​ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್​​ನಲ್ಲಿ ನೇಣು ಬಿಗಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈಕೆ ಇತ್ತೀಚೆಗೆ ವಿಚ್ಛೇದನ ಪಡೆದು ಪತಿಯಿಂದ ದೂರವಿದ್ದರು. ಆದರೆ ತನ್ನನ್ನು ಕ್ಷಮಿಸುವಂತೆ ಡೆತ್​ನೋಟ್​ ಮೂಲಕ ವಿಚ್ಛೇದಿತ ಪತಿಯಲ್ಲಿ ಕೋರಿಕೊಂಡಿದ್ದಾರೆ. ಜೊತೆಗೆ ಪಾಲಕರಲ್ಲೂ ಕ್ಷಮೆ ಕೋರಿದ್ದಾರೆ. ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ಎಂದೂ ಬರೆದುಕೊಂಡಿದ್ದಾರೆ. ಈಕೆ ವಿಚ್ಛೇದನದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.