ನ್ಯೂಸ್

ಕೇರಳದ ಮಾಜಿ ಸಿಎಂ, ಕಾಂಗ್ರೆಸ್​ನ ಹಿರಿಯ ನಾಯಕ ಉಮನ್​ ಚಾಂಡಿ ಬೆಂಗಳೂರಿನಲ್ಲಿ ವಿಧಿವಶ

ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್​ ನಾಯಕ ಉಮನ್​ ಚಾಂಡಿ ಇಂದು (ಜುಲೈ 18) ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಉಮನ್​ ಚಾಂಡಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಇಂದು ಬೆಳಗಿನ ಜಾವ ಸುಮಾರು 4 ಗಂಟೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಚಾಂಡಿ ಅವರು ಎರಡು ಬಾರಿ ಕೇರಳ ಮುಖ್ಯಮಂತ್ರಿಯಾಗಿದ್ದರು.

ಈ ವರ್ಷದ ಆರಂಭದಲ್ಲಿ ಚಾಂಡಿ ನ್ಯುಮೋನಿಯಾ ಸೋಂಕಿಗೆ ಒಳಗಾದ ಬಳಿಕ ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿತ್ತು.

ಉಮನ್​ ಚಾಂಡಿ ಅವರ ನಿಧನವನ್ನು ಅವರು ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ. "ಅಪ್ಪ ನಿಧನರಾಗಿದ್ದಾರೆ" ಎಂದು ಬರೆದುಕೊಂಡಿದ್ದಾರೆ. (ಏಜೆನ್ಸೀಸ್​)