ನ್ಯೂಸ್

ಅಳಿಯನಿಗೆ ಕೈ ತಪ್ಪಿದ ಟಿಕೆಟ್‌; ಕಾಂಗ್ರೆಸ್​ಗೆ ಮಾವ ರಾಜೀನಾಮೆ!

ತುಮಕೂರು: ನಗರ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಅಳಿಯ ಎಸ್.ರಫೀಕ್ ಅಹ್ಮದ್​ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಸಮರ್ಥ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ವಿಜಯಪುರ | 70 ಅಡಿ ಎತ್ತರದ ರಥದ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು

ಯುವ ಮುಖಂಡ ಇಕ್ಬಾಲ್ ಅಹ್ಮದ್​ಗೆ ಟಿಕೆಟ್ ನೀಡಿದ ಹೈ ಕಮಾಂಡ್ ನಿರ್ಧಾರವನ್ನು ಷಫಿ ಅಹ್ಮದ್ ವಿರೋಧಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದು ದೀರ್ಘಕಾಲದ ಕಾಂಗ್ರೆಸ್ ನಂಟು ಕಳಚಿಕೊಂಡಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಅಲ್ಪಸಂಖ್ಯಾತರ ಕಾರಣಕ್ಕೆ ಮಾಜಿ ಶಾಸಕ ಷಫಿ ಅಹ್ಮದ್ ಅವರ ಕುಟುಂಬಕ್ಕೆ ಮಣೆ ಹಾಕಲಾಗಿತ್ತು. ಷಫಿ ಎರಡು ಬಾರಿ ಹಾಗೂ ಅವರ ಅಳಿಯ ರಫಿಕ್ ಅಹ್ಮದ್ ಒಂದು ಬಾರಿ ಶಾಸಕರಾಗಿದ್ದರು. ಇದೀಗ ಮೊದಲ ಬಾರಿ ಷಫಿ ಕುಟುಂಬದ ಹೊರಗಿನ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇದನ್ನೂ ಓದಿ: ಚಾಲಕರೇ ಎಚ್ಚರ; ನಿಮ್ಮ ಆಟೋದಲ್ಲಿರುವ ರಾಜಕೀಯ ಪಕ್ಷಗಳ ಪೋಸ್ಟರ್​ ತೆಗೆಯದಿದ್ದರೆ ಬೀಳಲಿದೆ ದಂಡ