ನ್ಯೂಸ್

ಮಾಜಿ ಸಂಸದ ಅನಂತಕುಮಾರ ಹೆಗಡೆ ಮನೆಯಲ್ಲಿ ಅಗ್ನಿಅವಘಡ

Webdesk - Savina Naik

ಕಾರವಾರ: ಮಾಜಿ ಸಂಸದ ಅನಂತಕುಮಾರ ಹೆಗಡೆ ಮನೆಗೆ ವಿದ್ಯುತ್​ ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಅಗ್ನಿಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಯಲ್ಲಿ ಮನೆಯಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಶಿರಸಿ ನಗರದ KHB ಕಾಲೋನಿಯಲ್ಲಿರುವ ಅನಂತಕುಮಾರ ಹೆಗಡೆ ಮನೆಯಾಗಿದೆ.ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ . ಶಿರಸಿ ಮಾರುಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.