ನ್ಯೂಸ್

ತ್ರಿಪುರ: ಮಾಜಿ ಸಚಿವ, ಬಿಜೆಪಿ ಶಾಸಕ ಸುರ್ಜಿತ್ ದತ್ತಾ ನಿಧನ!

ಕೋಲ್ಕತ್ತಾ: ಮಾಜಿ ಸಚಿವ ಹಾಗೂ ತ್ರಿಪುರದ ಬಿಜೆಪಿ ಶಾಸಕ ಸುರ್ಜಿತ್ ದತ್ತಾ ಇಂದು ಬೆಳಗ್ಗೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದ ಸಮಸ್ಯೆಗಳಿಂದ ಬಳಲುತ್ತಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆರಂಭದಲ್ಲಿ ತ್ರಿಪುರಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದತ್ತಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ವಿಮಾನದಲ್ಲಿ ಕರೆದೊಯ್ಯಲಾಯಿತು ಎಂದು ವರದಿಯಾಗಿದೆ. ಹಿರಿಯ ನಾಯಕರು ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದರು.

ತದನಂತರ 2018ರ ವಿಧಾನಸಭಾ ಚುನಾವಣೆಗೂ ಮುನ್ನವೇ ಬಿಜೆಪಿಗೆ ಸೇರ್ಪಡೆಯಾಗಿದ್ದರು. 1988 ಮತ್ತು 1993ರ ನಡುವೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದರು,(ಏಜೆನ್ಸೀಸ್).