ನವದೆಹಲಿ: ಹಿರಿಯ ಸಮಾಜವಾದಿ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಯಾದವ್ (75) ನಿಧನರಾಗಿದ್ದಾರೆ. ಶರದ್ ಯಾದವ್ ಅವರ ಆರೋಗ್ಯದಲ್ಲಿ ಇತ್ತೀಚೆಗೆ ವ್ಯತ್ಯಯ ಉಂಟಾಗಿತ್ತು. ಹೀಗಾಗಿ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗೆ ಮೃತಪಟ್ಟಿದ್ದಾರೆ. ಶರದ್ ಯಾದವ್ ನಿಧನರಾಗಿರುವುದನ್ನು ಅವರ ಪುತ್ರಿ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ.
2003ರಿಂದ 2016ರವರೆಗೆ ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದ, ಶರದ್ ಯಾದವ್, ಮಧ್ಯಪ್ರದೇಶದ ಜಬಲ್ಪುರದಿಂದ ಲೋಕಸಭೆಗೆ ಮೊದಲ ಬಾರಿಗೆ ಪ್ರವೇಶಿಸಿದ್ದರು. ಬಳಿಕ 7 ಬಾರಿ ಲೋಕಸಭೆ ಹಾಗೂ 4 ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ವಿ.ಪಿ.ಸಿಂಗ್, ವಾಜಪೇಯಿರವರ ಸರ್ಕಾರದಲ್ಲಿ ಕೇಂದ್ರದ ಜವಳಿ ಮತ್ತು ಆಹಾರ ಸಂಸ್ಕರಣಾ, ಕಾರ್ಮಿಕ ಇಲಾಖೆ, ನಾಗರಿಕ ವಿಮಾನಯಾನ, ಆಹಾರ ಸಚಿವರಾಗಿದ್ದರು.