ಮುದ್ರಿತ ಸಂವಿಧಾನ ಪೀಠಿಕೆಯನ್ನು ಪ್ರತಿಷ್ಠಾಪಿಸಲು ಸಚಿವ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಶಾರದಾ ಪೂರ‌್ಯಾನಾಯ್ಕಾ, ಎಸ್.ಎನ್.ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಬಲ್ಕಿಷ್ ಬಾನು ಇತರರಿದ್ದರು. 
ನ್ಯೂಸ್

ಭಾವೈಕ್ಯದಿಂದ ಜೀವಿಸಲು ಬುನಾದಿ: ಮಧು ಬಂಗಾರಪ್ಪ

ಶಿವಮೊಗ್ಗ: ಭಾರತೀಯರೆಲ್ಲರೂ ಒಂದೇ ಎಂಬ ಸಂದೇಶ ಸಾರುವ ಸಂವಿಧಾನದ ಪೀಠಿಕೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಹಳೇ ಜೈಲು ಆವರಣದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ 10*6 ಅಡಿ ಅಳತೆಯ ಮುದ್ರಿತ ಸಂವಿಧಾನ ಪೀಠಿಕೆಯನ್ನು ಪ್ರತಿಷ್ಠಾಪಿಸಲು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ವೈವಿಧ್ಯಮಯ ಭಾರತದಲ್ಲಿ ದ್ವೇಷ, ವೈಷಮ್ಯವಿಲ್ಲದೆ ಎಲ್ಲರೂ ಭಾವೈಕ್ಯದಿಂದ ಬದುಕಲು ಅನುವಾಗುವಂತಹ ಸಂವಿಧಾನವನ್ನು ಡಾ. ಅಂಬೇಡ್ಕರ್ ನೀಡಿದ್ದಾರೆ ಎಂದು ಸ್ಮರಿಸಿದರು.

ವಿದ್ಯಾರ್ಥಿಗಳು ಸಂವಿಧಾನ ಪರವಾದ ಘೋಷ ವಾಕ್ಯಗಳ ಫಲಕ ಹಿಡಿದು ಹಳೇ ಜೈಲು ಆವರಣದಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಸಿದರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ‌್ಯಾನಾಯ್ಕಾ, ಎಂಎಲ್‌ಸಿಗಳಾದ ಬಲ್ಕಿಷ್ ಬಾನು, ಡಾ.ಧನಂಜಯ ಸರ್ಜಿ, ಡಿಸಿ ಗುರುದತ್ತ ಹೆಗಡೆ, ಜಿಪಂ ಸಿಇಒ ಎನ್.ಹೇಮಂತ್, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಎಡಿಸಿ ಸಿದ್ದಲಿಂಗ ರೆಡ್ಡಿ, ಪಾಲಿಕೆ ಆಯುಕ್ತೆ ಡಾ. ಕವಿತಾ ಯೋಗಪ್ಪನವರ್ ಇತರರಿದ್ದರು.