ಬಿ.ಎಂ ಮಂಜಪ್ಪ 
ನ್ಯೂಸ್

31ಕ್ಕೆ ಸಮುದಾಯ ಭವನಕ್ಕೆ ಶಂಕುಸ್ಥಾಪನೆ

ಸಾಗರ: ಪ್ರಾಂತ್ಯ ಆರ್ಯ ಈಡಿಗರ ಸಂಘದ ಬೆಳ್ಳಿಹಬ್ಬದ ಅಂಗವಾಗಿ ನೂತನ ಸಮುದಾಯ ಭವನ ಹಾಗೂ ವಾಣಿಜ್ಯ ಮಳಿಗೆಗಳ ಶಂಕುಸ್ಥಾಪನೆ ಕಾರ್ಯಕ್ರಮ ವರದಹಳ್ಳಿ ರಸ್ತೆಯಲ್ಲಿರುವ ಈಡಿಗರ ಸಮುದಾಯ ಭವನದ ಆವರಣದಲ್ಲಿ ಮಾ.31ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಎಂ.ಮಂಜಪ್ಪ ಮರಸ ಹೇಳಿದರು.

ಸಮುದಾಯ ಭವನಕ್ಕೆ ಸಚಿವ ಮಧು ಬಂಗಾರಪ್ಪ, ವಾಣಿಜ್ಯ ಮಳಿಗೆಗಳ ಶಂಕುಸ್ಥಾಪನೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ನೆರವೇರಿಸುವರು. ಬೆಳಗ್ಗೆ 11ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಶಾಸಕ ಭೀಮಣ್ಣ ಟಿ. ನಾಯ್ಕ್ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಮಾಜಿ ಸಚಿವ, ಗೌರವ ಡಾಕ್ಟರೇಟ್ ಪುರಸ್ಕೃತ ಕಾಗೋಡು ತಿಮ್ಮಪ್ಪ, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ರಾಮಪ್ಪ ಅವರನ್ನು ಸನ್ಮಾನಿಸಲಾಗುವುದು. ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅಭಿನಂದನಾ ಭಾಷಣ ಮಾಡುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್‌ಕುಮಾರ್, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಕುಮಾರ ಬಂಗಾರಪ್ಪ, ಮಾಜಿ ಶಾಸಕರಾದ ಬಿ.ಸ್ವಾಮಿರಾವ್, ಡಾ. ಜಿ.ಡಿ.ನಾರಾಯಣಪ್ಪ, ಎಚ್.ಆರ್.ಗವಿಯಪ್ಪ, ಉಮಾನಾಥ ಕೋಟ್ಯಾನ್, ಶ್ರೀಧರ ಹುಲ್ತಿಕೊಪ್ಪ ಮತ್ತಿತರರು ಭಾಗವಹಿಸುವರು ಎಂದರು.

ಟಿ.ವಿ.ಪಾಂಡುರಂಗ, ತುಕಾರಾಮ ಶಿರವಾಳ, ಎಚ್.ಎನ್.ದಿವಾಕರ್, ಟಿ.ಪರಮೇಶ್ವರ, ಕಲಸೆ ಶಿವಪ್ಪ, ಮಹಾಬಲ ಕೌತಿ, ಗಿರೀಶ್ ಕೋವಿ, ಗುರುಮೂರ್ತಿ ಸುದ್ದಿಗೋಷ್ಠಿಯಲ್ಲಿದ್ದರು.