ನ್ಯೂಸ್

ಮೂರು ಜಿಲ್ಲೆಗಳಿಗೆ ಹೊಸ ಜಿಲ್ಲಾಧಿಕಾರಿ: ಒಟ್ಟು ನಾಲ್ವರು ಐಎಎಸ್​ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ವಿವರ…

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಮೂರು ಜಿಲ್ಲೆಗಳ ಜಿಲ್ಲಾಧಿಕಾರಿ ಬದಲಾವಣೆಗೊಂಡಿದ್ದಾರೆ. ಈ ಕುರಿತು ಇಂದು ಅಧಿಕೃತ ಆದೇಶ ಹೊರಬಿದ್ದಿದೆ.

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ದಿವಾಕರ್ ಅವರನ್ನು ವಿಜಯನಗರದ ನೂತನ ಜಿಲ್ಲಾಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ. ಹಾಗೇ ವಿಜಯನಗರ ಜಿಲ್ಲಾಧಿಕಾರಿ ಆಗಿದ್ದ ವೆಂಕಟೇಶ್ ಟಿ. ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಗದಗ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಬಿ.ಸುಶೀಲಾ ಅವರನ್ನು ಯಾದಗಿರಿಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಆಗಿದ್ದ ಎಸ್.ರಮ್ಯಾ ಅವರನ್ನು ಬಿಎಂಆರ್​ಡಿಎ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.