ಬಂಗಾರಪೇಟೆ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 
ನ್ಯೂಸ್

ಅಪಘಾತದಲ್ಲಿ ನಾಲ್ವರ ಸಾವು

ಕಿರುವಾರ ಎಸ್.ಸುದರ್ಶನ್

ಕೋಲಾರ: ಇನ್ನೋವಾ ಕಾರು ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಅಪಘಾತದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ,

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಸಮೀಪದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೇನಲ್ಲಿ ಘಟನೆ ಸಂಭವಿಸಿದ್ದು, ಕಾರ್‌ನಲ್ಲಿ ಇದ್ದ ಮಹೇಶ(45), ಉದ್ವಿತ (2), ರತ್ನಮ್ಮ (60) ಮೃತಪಟ್ಟಿದ್ದಾರೆ. ಇನ್ನು ಬೈಕ್‌ ಸವಾರನು ಮೃತಪಟ್ಟಿದ್ದು ಗುರುತು ಪತ್ತೆಯಾಗಿಲ್ಲ. ಸುಶ್ಮಿತಾ, ವಿರುತ, ಸುಜಾತ, ಸುನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಕೋಲಾರದ ಖಾಸಗಿ ಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭಾನುವಾರ ಕಾರ್ಯಕ್ರಮ ನಿಮ್ಮತ್ತ ಬೆಂಗಳೂರಿಗೆ ತೆರಳಿದ್ದ ಕೆಜಿಎಫ್‌ ತಾಲೂಕಿನ ಕಮ್ಮಸಂದ್ರ ಗ್ರಾಮದವರು ಸೋಮವಾರ ಮುಂಜಾನೆ ಸ್ವಗ್ರಾಮಕ್ಕೆ ವಾಪಸ್‌ ಆಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಾಹಿತಿ ತಿಳಿಸಿದ ಬಂಗಾರಪೇಟೆ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.