ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಆಡಳಿತದಲ್ಲಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆ ವತಿಯಿಂದ 2025-26ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಪಡೆದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಉಚಿತವಿದೆ. ಶೇ.90ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ಹಾಗೂ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ಮಣಿಪಾಲ ಜ್ಞಾನಸುಧಾ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್ ಸಂಯೋಜನೆಯಿದ್ದು ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಮತ್ತು ರಾಷ್ಟ್ರೀಯ ಕಾನೂನು ವಿದ್ಯಾಲಯಗಳ ಪ್ರವೇಶ ಪರೀಕ್ಷೆ ಕ್ಲಾಟ್ ತರಬೇತಿ ಪ್ರಾರಂಭಗೊಳ್ಳಲಿದೆ. ಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಪಿ.ಸಿ.ಎಂ.ಬಿ., ಪಿ.ಸಿ.ಎಂ.ಸಿಎಸ್. ಸಂಯೋಜನೆಗಳಿವೆ. ಪ್ರಥಮ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಜೂನ್‌ನಲ್ಲಿ ವಿದ್ಯಾರ್ಥಿ ವೇತನ ಪರೀಕ್ಷೆ ನಡೆಯಲ್ಲಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆಯಲಿದೆ. ಸಂಸ್ಥೆಯಲ್ಲಿ ರಾಷ್ಟ್ರಮಟ್ಟದ ಎಂ.ಬಿ.ಬಿ.ಎಸ್. ಪ್ರವೇಶ ಪರೀಕ್ಷೆ ನೀಟ್, ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಜೆ.ಇ.ಇ. ಮೈನ್, ಕೆ-ಸಿ.ಇ.ಟಿ. ತರಬೇತಿಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ 8147454902 ಸಂಖ್ಯೆ ಸಂಪರ್ಕಿಸುವಂತೆ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.