ಲಕ್ಷ್ಮೇಶ್ವರ: ದೇಶದ ಕಟ್ಟಕಡೆಯ ವ್ಯಕ್ತಿಯೂ ಆರೋಗ್ಯವಂತನಾಗಿರಬೇಕು. ಎಲ್ಲರಿಗೂ ಉಚಿತ ಆರೋಗ್ಯ ಸೇವೆ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಲಾಗಿದೆ. ನಾಗರಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭವ ಅಭಿಯಾನದಡಿ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಡಾ.ಎಸ್.ಎಸ್. ನೀಲಗುಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದಲ್ಲಿ ನೂರಾರು ಜನರು ಹೃದಯ, ಮಧುಮೇಹ, ಎಲುಬು ಕೀಲು, ನೇತ್ರ, ಸ್ತ್ರೀರೋಗ ಸೇರಿ ವಿವಿಧ ಬಗೆಯ ಕಾಯಿಲೆಗಳಿಗೆ ತಪಾಸಣೆ ಮಾಡಿಸಿಕೊಂಡರು. ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಸುಭಾಸ ದಾಯಗೊಂಡ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀಕಾಂತ ಕಾಟೆವಾಲೆ, ಜಿಲ್ಲಾ ಸಮೀಕ್ಷಾ ಅಧಿಕಾರಿ ಡಾ. ವೆಂಕಟೇಶ ರಾಠೋಡ, ಡಾ. ಪ್ರವೀಣ ಸಜ್ಜನ, ಬಿ.ಎಸ್. ಹಿರೇಮಠ, ನವೀನ ಬೆಳ್ಳಟ್ಟಿ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ವಾಸು ಪಾಟೀಲ ಇತರರಿದ್ದರು, ಕೃಷ್ಣಕುಮಾರ ಕುಲಕರ್ಣಿ ನಿರ್ವಹಿಸಿದರು.
ಆರೋಗ್ಯ ಕೇಂದ್ರದ ನೂತನ ಸಭಾಭವನವನ್ನು ಶಾಸಕರು ಉದ್ಘಾಟಿಸಿದರು.