ನ್ಯೂಸ್

ವಿದ್ಯಾರ್ಥಿಗಳಿಗೆ ಪ್ರತಿದಿನ 2 ಜಿಬಿ ಡೇಟಾ ಫ್ರೀ! ಸಂಕ್ರಾಂತಿ ಗಿಫ್ಟ್​ ಕೊಟ್ಟ ಪಳನಿಸ್ವಾಮಿ

Mandara

ಚೆನ್ನೈ: ಕರೊನಾ ಹಿನ್ನೆಲೆಯಲ್ಲಿ ಆನ್​ಲೈನ್​ ತರಗತಿಗಳಿಗೆ ಹೆಚ್ಚು ಒತ್ತು ಕೊಡಲಾಗಿದ್ದು, ಇದೀಗ ತಮಿಳುನಾಡು ಸರ್ಕಾರ ವಿದ್ಯಾರ್ಥಿಗಳಿಗೆ ಸಂಕ್ರಾಂತಿ ಹಬ್ಬದ ಗಿಫ್ಟ್​ ಕೊಡಲು ಮುಂದಾಗಿದೆ. ಪ್ರತಿ ವಿದ್ಯಾರ್ಥಿಗೆ ಪ್ರತಿ ದಿನ 2 ಜಿಬಿ ಡೇಟಾವನ್ನು ಉಚಿತವಾಗಿ ಕೊಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ 9,69,047 ವಿದ್ಯಾರ್ಥಿಗಳಿಗೆ ಪ್ರತಿದಿನ 2 ಜಿಬಿ ಡೇಟಾ ಉಚಿತವಾಗಿ ಕೊಡಲಾಗುವುದು. ಸರ್ಕಾರಿ, ಸರ್ಕಾರಿ ಅನುದಾನಿತ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜುಗಳು, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಿಗೆ ಇದು ಅನ್ವಯಿಸಲಿದೆ. ಜನವರಿಯಿಂದ ಏಪ್ರಿಲ್​ವರೆಗೆ ಈ ಸೌಲಭ್ಯ ಲಭ್ಯವಿರಲಿದೆ. ಉಚಿತ ಇಂಟರ್​ನೆಟ್​ನ್ನು ವಿದ್ಯಾರ್ಥಿಗಳು ಆನ್​ಲೈನ್​ ತರಗತಿಗಳಿಗೆ ಬಳಸಿಕೊಳ್ಳತಕ್ಕದ್ದು ಎಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)