ಭಾಗಮಂಡಲ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
2006-2007ನೇ ಸಾಲಿನಲ್ಲಿ ಈ ಶಾಲೆಯಲ್ಲಿ ಏಳನೇ ತರಗತಿ ತನಕ ವ್ಯಾಸಂಗ ಮುಗಿಸಿದ ವಿದ್ಯಾರ್ಥಿಗಳು ಈ ಕಾರ್ಯಕ್ರಮ ಆಯೋಜಿಸಿದ್ದರು. ವಿದ್ಯೆ ಕಲಿಸಿದ ಗುರುಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಇಲ್ಲಿನ ಮಕ್ಕಳಿಗೆ ಅನುಕೂಲ ಆಗುವ ಸಲುವಾಗಿ ಶಾಲೆಯ ಹಿರಿಯ ವಿದ್ಯಾರ್ಥಿಗಳು 23 ಸಾವಿರ ರೂ. ವೆಚ್ಚದಲ್ಲಿ ಪ್ರೊಜೆಕ್ಟರ್, ಮಕ್ಕಳಿಗೆ ತಟ್ಟೆ , ಲೋಟಗಳನ್ನು ಹಸ್ತಾಂತರಿಸಲಾಯಿತು. 40ಕ್ಕೂ ಹೆಚ್ಚಿನ ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸರ್ಫುದ್ದೀನ್, ನೌಫಲ್, ಶ್ರುತಿ, ಧನಲಕ್ಷ್ಮೀ, ಜೆ.ಎನ್.ಮನೋಜ್ ಸೇರಿದಂತೆ ಹಿರಿಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.