ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್ ಉದ್ಯಾನವನಕ್ಕೆ ಜಿ20 ಶೃಂಗಸಭೆಯ ಗಣ್ಯರು ಭೇಟಿ ನೀಡಲಿದ್ದು, ಭದ್ರತಾ ದೃಷ್ಟಿಯಿಂದ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರು ಒಳಗೊಂಡಂತೆ ಪ್ರವಾಸಿಗರು ಹಾಗೂ ವಾಯುವಿಹಾರಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.