ನ್ಯೂಸ್

ಗಾಂಧಿ ನಡಿಗೆಯಲ್ಲಿ ಸಿದ್ದರಾಮಯ್ಯ; ಸಿಎಂಗೆ ಗಾಂಧಿ ಟೋಪಿ ಹಾಕಿದ ಡಿಸಿಎಂ

Bengaluru - Political - Shivananda Tagadur

ಬೆಂಗಳೂರು:
ಗಾಂಧೀಜಿ ಅವರು ಸ್ವಾತಂತ್ರ ಚಳವಳಿಯ ನೇತೃತ್ವ ವಹಿಸಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಗಾಂಧಿ ನಡಿಗೆ ಕಾರ್ಯಕ್ರಮಕ್ಕೆ ಗಾಂಧಿ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಗಾಂಧಿ ಭವನ ಆವರಣಕ್ಕೆ ಸಿಎಂ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಾಂಧಿ ಟೋಪಿ ಹಾಕಿದರು. ಬಳಿಕ ಸಿಎಂ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗಾಂಧಿ ನಡಿಗೆಯಲ್ಲಿ ಪಾಲ್ಗೊಂಡರು. ವಿಧಾನಸೌಧದ ತನಕ ನಡೆದ ನಡಿಗೆಯಲ್ಲಿ ಸಿಎಂ ಜೊತೆಗೆ ಮಾಜಿ ಸಿಎಂ ವೀರಪ್ಪ ಮೊಯಿಲಿ, ಸಚಿವರಾದ ಎಚ್.ಕೆ.ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮತ್ತಿತರರು ಹೆಜ್ಜೆ ಹಾಕಿದರು. ರಾಷ್ಟ್ರದ್ವಜ ಹಿಡಿದು ನಾನಾ ಕಾಲೇಜು ವಿದ್ಯಾರ್ಥಿಗಳು ನಡಿಗೆಯಲ್ಲಿ ಭಾಗವಹಿಸಿದ್ದರು.

ಗಾಂಧಿ, ಶಾಸೀ ಭಾವಚಿತ್ರಕ್ಕೆ ಮಾಲಾರ್ಪಣೆ
ರಾಷ್ಟಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನದ ಅಂಗವಾಗಿ ವಿಧಾನಸೌಧದ ಗಾಂಧೀಜಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಹಾಗೂ ಭಾರತದ ಮಾಜಿ ಪ್ರಧಾನಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತಿ ಅವರ 120ನೇ ಜನ್ಮದಿನದ ಅಂಗವಾಗಿ ಅವರ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.