ಆವರ್ತಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹಾರನಹಳ್ಳಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಸಾಧನೆ ಮಾಡಿದ ಬೆಟ್ಟದಪುರ ಸಮೀಪದ ಗಂಗನಕುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು. 
ನ್ಯೂಸ್

ತಾಲೂಕು ಮಟ್ಟಕ್ಕೆ ಗಂಗನಕುಪ್ಪೆ ಶಾಲೆ ಮಕ್ಕಳು ಆಯ್ಕೆ

ಬೆಟ್ಟದಪುರ: ಆವರ್ತಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹಾರನಹಳ್ಳಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಬೆಟ್ಟದಪುರ ಸಮೀಪದ ಗಂಗನಕುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ, 4/100 ರಿಲೇಯಲ್ಲಿ (ದ್ವಿ), ಎತ್ತರ ಜಿಗಿತ ಸ್ಪರ್ಧೆಯಲ್ಲಿ ವಿನೇಶ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದರು. ಈ ಹಿನ್ನೆಲೆಯಲ್ಲಿ ಗುರುವಾರ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರು ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು.

ಎಸ್‌ಡಿಎಂಸಿ ಅಧ್ಯಕ್ಷೆ ಲತಾಕುಮಾರ್, ಮುಖಂಡ ಕೆಂಪೇಗೌಡ, ಮುಖ್ಯಶಿಕ್ಷಕ ಅಶೋಕ್, ಶಿಕ್ಷಕರಾದ ಲಕ್ಷ್ಮಣ್, ಸುನೀತಾ, ಆಶಾರಾಣಿ, ಅಂಗನವಾಡಿ ಕಾರ್ಯಕರ್ತೆ ಜಯಂತಿ ಹಾಗೂ ವಿದ್ಯಾರ್ಥಿಗಳು ಇದ್ದರು.