ನ್ಯೂಸ್

ಉತ್ತರಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ; ಕಾರವಾರದ ಡಿ.ಸಿ. ಕಚೇರಿಯಲ್ಲಿ ಅಧಿಕಾರ ಸ್ವೀಕಾರ

ಉತ್ತರಕನ್ನಡ: ಉತ್ತರಕನ್ನಡ ನೂತನ ಜಿಲ್ಲಾಧಿಕಾರಿ ಯಾಗಿ ಗಂಗೂಬಾಯಿ ಮಾನಕರ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಅವರಿಂದ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ರಮೇಶ ಮಾನಕ‌ರ ಅವರನ್ನ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಇವರು, 1998ನೇ ಸಾಲಿನ ಕೆಎಎಸ್ ಬ್ಯಾಚ್​ನ ಅಧಿಕಾರಿಯಾಗಿದ್ದ ಗಂಗೂಬಾಯಿ, ಈ ಹಿಂದೆ ಕುಮಟಾ ಉಪವಿಭಾಗಾಧಿಕಾರಿಯೂ ಕೆಲಸ ಮಾಡಿದ್ದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಎಲ್ಲರ ಸಹಕಾರ ಪಡೆದು ಜಿಲ್ಲೆಯಲ್ಲಿ ಕಾರ್ಯ ಮಾಡುವ ಭರವಸೆ ನೀಡಿದ್ದಾರೆ.