ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಸಂಸದ ಗೌರವ್ ಗೊಗೊಯ್ ಅವರಿಗೆ ಪಕ್ಷ ಮತ್ತೊಮ್ಮೆ ಅವಕಾಶ ನೀಡಿದೆ.
ಮುಖ್ಯ ಸಚೇತಕರನ್ನಾಗಿ ಹಿರಿಯ ನಾಯಕ ಕೋಡಿಕುನ್ನಿಲ್ ಸುರೇಶ್, ಸಚೇತಕರನ್ನಾಗಿ ಮಾಣಿಕ್ಕಂ ಟ್ಯಾಗೋರ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ನೇಮಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ನಾಯಕಿ ಸೋನಿಯಾ ಗಾಂಧಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭಾನುವಾರ 'ಎಕ್ಸ್' ವೇದಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿ ಕೂಟದ ಪಕ್ಷಗಳು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಟ್ಟಾಗಿ ಹೋರಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.