ಆಂಧ್ರಪ್ರದೇಶ: ನಟಿ, ಮಾಡೆಲ್ ಊರ್ವಶಿ ರೌಟೇಲಾ ಅವರನ್ನು ಟ್ರೋಲ್ ಮಾಡುವುದು ಹೊಸದೇನಲ್ಲ. ಆಗಾಗ್ಗೆ ವಿವಾದಗಳಲ್ಲಿ ಸಿಕ್ಕಿಬೀಳುತ್ತಾರೆ. ಆದರೆ ಇದೀಗ ಊರ್ವಶಿ, ತೆಲುಗು ಸ್ಟಾರ್ ಪವನ್ ಕಲ್ಯಾಣ್ ಅವರನ್ನು 'ಆಂಧ್ರಪ್ರದೇಶದ ಗೌರವಾನ್ವಿತ ಸಿಎಂ' ಎಂದು ಕರೆಯುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
ಊರ್ವಶಿ ರೌಟೇಲಾ ನಟನೆಯ ‘ಬ್ರೋ’ ಸಿನಿಮಾದಲ್ಲಿ ಪವನ್ ಕಲ್ಯಾಣ್ ಕೂಡ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಕಾರ್ಯಕ್ರಮವೊಂದರ ಫೋಟೋ ಹಂಚಿಕೊಂಡಿದ್ದ ಊರ್ವಶಿ, ‘ಗೌರವಾನ್ವಿತ ಮುಖ್ಯಮಂತ್ರಿಗಳಾದ ಪವನ್ ಕಲ್ಯಾಣ್ ಅವರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಅದೇ ಇದೀಗ ಚರ್ಚೆಗೆ ಕಾರಣವಾಗಿದೆ.
ಆಂಧ್ರ ಪ್ರದೇಶದ ಮುಖ್ಯಮಂತ್ರಿ ನಟ ಪವನ್ ಕಲ್ಯಾಣ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ಆಂಧ್ರಪ್ರದೇಶದಲ್ಲಿ ಯಾವುದೇ ಚುನಾವಣೆ ನಡೆಯದೇ ಇದ್ದರೂ, ಮುಖ್ಯಮಂತ್ರಿಯನ್ನೇ ರೌಟೇಲಾ ಬದಲಾಯಿಸಿದ್ದಾರೆ. ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ನೆಟ್ಟಿಗರು ನಟಿಯ ಹೇಳಿಕೆಗೆ ಕಿಡಿಕಾರುತ್ತಿದ್ದಾರೆ.
ಮುಂದಿನ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಪವನ್ ರಾಜ್ಯದ ಪ್ರವಾಸ ಮಾಡುತ್ತಿದ್ದಾರೆ. ಅಲ್ಲದೇ, ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. . ನಮಗೆ ನಟನ ಕುರಿಆಗಿ ಯಾವುದೇ ದ್ವೇಷವಿಲ್ಲ. ಆದರೆ ನಟಿಯ ಈ ಹೇಳಿಕೆ ಎಷ್ಟು ಸರಿ?, ಈಕೆಯನ್ನು ಗಡಿಪಾರು ಮಾಡಿ, ಇಂತಹ ಹೇಳಿಕೆ ನೀಡಬೇಡಿ ಎಂದು ಹೀಗೆ ನೆಟ್ಟಿಗರು ಕಾಮೆಂಟ್ ಮಾಡುವ ಮೂಲಕವಾಗಿ ಆಕ್ರೋಶ ಹೊರಹಾಕಿದ್ದಾರೆ.