ನ್ಯೂಸ್

ಶಿವಣ್ಣನ ಘೋಸ್ಟ್ ಸಿನಿಮಾ ರಿಲೀಸ್‌ಗೆ ದಿನಗಣನೆ, ಅಕ್ಟೋಬರ್ 19 ರಂದು ದೇಶಾದ್ಯಂತ ಬಿಡುಗಡೆ

Ghost Movie Relase Date : ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ "ಘೋಸ್ಟ್" ಚಿತ್ರ ಅಕ್ಟೋಬರ್ 19 ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸಿರುವ ಚಿತ್ರ ಇದಾಗಿದ್ದು, ಘೋಸ್ಟ್‌ ಸಿನಿಮಾ ಬಗ್ಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್​​, ನಾನು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಟಿಸಿರುವ ಮೂರನೇ ಚಿತ್ರವಿದು.


ವಿಶೇಷವೆಂದರೆ ನಾನು ಈ ಚಿತ್ರದಲ್ಲಿ ಮೂರು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ. ನಾನು ಈವರೆಗೂ ಮಾಡಿರದ ಪಾತ್ರವೆನ್ನಬಹುದು. ಶ್ರೀನಿ ನಿರ್ದೇಶನ, ಮಹೇಂದ್ರ ಸಿಂಹ ಅವರ ಛಾಯಾಗ್ರಹಣ ಎಲ್ಲವೂ ಚೆನ್ನಾಗಿದೆ ಎಂದಿದ್ದಾರೆ.


ಈ ಚಿತ್ರದಲ್ಲಿ ಅನುಪಮ್ ಖೇರ್, ಜಯರಾಮ್, ಸತ್ಯಪ್ರಕಾಶ್ ಅವರ ಜೊತೆ ಅಭಿನಯಿಸಿದ್ದು ಖಷಿಯಾಗಿದೆ. ಬಹು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರದ ಪ್ರಚಾರಕ್ಕಾಗಿ ಸಾಕಷ್ಟು ಊರಿಗೆ ಈಗಾಗಲೇ ಭೇಟಿ ನೀಡಿದ್ದೇನೆ. ಚಿತ್ರವು ಯಶಸ್ವಿಯಾಗುವ ನಿರೀಕ್ಷೆ ಇದೆ.


ಇನ್ನು ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಶ್ರೀನಿ, ಉತ್ತರ ಭಾರತದಲ್ಲಿ ಹಿಂದಿ ಭಾಷೆಯಲ್ಲಿ, ಕೇರಳ ಹಾಗೂ ತಮಿಳುನಾಡಿನಲ್ಲಿ ತಮಿಳಿನಲ್ಲಿ ಅಕ್ಟೋಬರ್ 19 ರಂದು ಬಿಡುಗಡೆಯಾಗಲಿದೆ . ಆಂದ್ರ ಹಾಗೂ ತೆಲಂಗಾಣದಲ್ಲಿ ಮಾತ್ರ ಮುಂದಿನವಾರ ಚಿತ್ರ ತೆರೆಗೆ ಬರಲಿದೆ.

ಅಕ್ಟೋಬರ್ 18ರ ಮಧ್ಯರಾತ್ರಿ ಅಭಿಮಾನಿಗಳಿಗಾಗಿ ವಿಶೇಷ ಪ್ರದರ್ಶನವಿರುತ್ತದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದಿದ್ದಾರೆ.

ಈ ಚಿತ್ರ ಕೂಡ ಭರ್ಜರಿ ಯಶಸ್ವಿಯಾಗುವ ನಂಬಿಕೆಯಿದೆ ಎಂದು ನಿರ್ಮಾಪಕ ಸಂದೇಶ್ ಎನ್ ಹೇಳಿದ್ದಾರೆ.