ಪಾಟ್ನಾ: ಇಡೀ ದೇಶದ ಗಮನವನ್ನು ತನ್ನತ್ತ ಸೆಳೆದುಕೊಂಡಿದ್ದ ಬಿಹಾರ ವಿಧಾನಸಭಾ ಚುನಾವಣೆಯ (Bihar Election) ಎಕ್ಸಿಟ್ ಪೋಲ್ ಫಲಿತಾಂಶಗಳು ಎರಡನೇ ಹಂತದ ಮತದಾನ ಮುಗಿದ ಬಳಿಕ ಮಂಗಳವಾರ ( ನ 11) ಸಂಜೆ ಘೋಷಣೆಯಾಗುತ್ತಿದ್ದು. ಅನೇಕ ಸಮೀಕ್ಷೆಗಳು ಮತ್ತೊಮ್ಮೆ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟವೇ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.
ಇತ್ತೀಚೆಗೆ ನಿರ್ಗಮನ ಸಮೀಕ್ಷೆಯ ಭವಿಷ್ಯವಾಣಿಗಳು ಸರಿಯಾಗಿದ್ದಕ್ಕಿಂತ, ತಪ್ಪಾಗಿರುವುದೇ ಹೆಚ್ಚು. ಅದಕ್ಕೆ 2024 ರ ಲೋಕಸಭಾ ಚುನಾವಣೆ, ಹರಿಯಾಣ ವಿಧಾನಸಭಾ ಚುನಾವಣೆ ಸಾಕ್ಷಿ.
ಇದನ್ನೂ ಓದಿ:ದೆಹಲಿ ಕಾರು ಸ್ಫೋಟ: ಬಂಧಿತ ಉತ್ತರ ಪ್ರದೇಶದ ವೈದ್ಯೆ ಡಾ. ಶಹೀನಾ ಮೇಲೆ ತನಿಖಾಧಿಕಾರಿಗಳ ಗಮನ, ಯಾಕೆ?| Dr. Shaheena
2025 ರ ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಿತು. ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ. ಮೊದಲ ಹಂತದಲ್ಲಿ, 18 ಜಿಲ್ಲೆಗಳ 121 ಕ್ಷೇತ್ರಗಳಿಗೆ ಚುನಾವಣೆ ನಡೆದರೆ, 2 ನೇ ಹಂತದಲ್ಲಿ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಿತು. ಈಗ ಬಿಡುಗಡೆಯಾಗಿರುವ ಎಂಟು ಸಮೀಕ್ಷೆಗಳ ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿದ್ದು. ದೈನಿಕ್ ಭಾಸ್ಕರ್ ಸಮೀಕ್ಷೆಯು ಎನ್‌ಡಿಎ 145 ರಿಂದ 160 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅಂದಾಜಿಸಿದೆ, ಇತ್ತ ಮ್ಯಾಟ್ರಿಜ್ 147 ರಿಂದ 167 ಸ್ಥಾನಗಳ ಭವಿಷ್ಯ ನುಡಿದಿದೆ.
ಬಿಹಾರದಲ್ಲಿ ಎನ್‌ಡಿಎ, ಮಹಾಘಟಬಂಧನ್ ಮತ್ತು ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರಿಂದ, ಪ್ರಚಾರವು ತೀವ್ರ ತುರುಸಿನಿಂದ ಕೂಡಿತ್ತು. ಎನ್‌ಡಿಎ ತನ್ನ ವಿರುದ್ಧ ಇದ್ದ ಆಡಳಿತ ವಿರೋಧಿ ಅಲೆಯನ್ನು ಎದುರಿಸಿ, ಮತ್ತೊಮ್ಮೆ ಅಧಿಕಾರಕ್ಕೆ ಬರಲು ಅಭಿವೃದ್ಧಿ ಕಾರ್ಯಗಳನ್ನು ನೆಚ್ಚಿಕೊಂಡಿದೆ. ರಾಜ್ಯದ ಅನೇಕ ಕಡೆಗಳಲ್ಲಿ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ, ಆರ್‌ಜೆಡಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಂಗಲ್ ರಾಜ್ ಆಡಳಿತ ನಡೆಯಲಿದೆ ಎಂದು ಎಚ್ಚರಿಸಿದ್ದರು.(ಏಜೆನ್ಸೀಸ್)