ನ್ಯೂಸ್

ಕೃಷ್ಣಾ ನದಿಗೆ ಹಾರಿ ಯುವತಿ ಆತ್ಮಹತ್ಯೆ! ಮೃತದೇಹಕ್ಕಾಗಿ ಶೋಧ

ಮೋಹನ್​ ಶೆಟ್ಟಿ

ಮುದ್ದೇಬಿಹಾಳ: ಯುವತಿಯೊಬ್ಬಳು ಕೃಷ್ಣಾ ನದಿಗೆ ಹಾರಿ ಪ್ರಾಣಬಿಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮದಲ್ಲಿ ವರದಿಯಾಗಿದೆ.

ಯುವತಿ ಬಾಲವ್ವ ಕಮರಿ ವಿಜಯಪುರ-ಬಾಗಲಕೋಟ ಜಿಲ್ಲಾ ಗಡಿಯಲ್ಲಿರುವ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿಯ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು ಆಕೆಯ ಶವಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಅಗ್ನಿಶಾಮಕ ದಳದ ತಂಡ ನುರಿತ ಈಜುಗಾರರೊಂದಿಗೆ ಮೃತದೇಹ ಹುಡುಕುವ ಪ್ರಯತ್ನ ಮುಂದುವರೆಸಿದ್ದಾರೆ. ಸಪ್ಟೆಂಬರ್ 14ರಂದೇ ಯುವತಿ ನದಿಗೆ ಹಾರಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.